ಯೆಮೆನ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯೆಮೆನ್ ಗಲ್ಲು ಶಿಕ್ಷೆ ರದ್ದುಗೊಳಿಸಿದೆ.ಹಾಗೂ ಶೀಘ್ರವೇ ಅವರನ್ನ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.
ಯೆಮೆನ್ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಕ್ರಿಶ್ಚಿಯನ್ ಧರ್ಮಪ್ರಚಾರಕ ಕೆಎ ಪಾಲ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಕೆಎ ಪಾಲ್ ಪ್ರಧಾನಿ ಮೋದಿಗೂ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಕ್ರಿಶ್ಚಿಯನ್ ಧರ್ಮಪ್ರಚಾರಕ ಮತ್ತು ಜಾಗತಿಕ ಶಾಂತಿ ಉಪಕ್ರಮದ ಸಂಸ್ಥಾಪಕ ಡಾ. ಕೆಎ ಪಾಲ್ ಮಂಗಳವಾರ ರಾತ್ರಿ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಡಾ. ಕೆಎ ಪಾಲ್ ಅವರು ವೀಡಿಯೊ ಸಂದೇಶದಲ್ಲಿ ಯೆಮೆನ್ ನಾಯಕರಿಗೆ ಧನ್ಯವಾದ ಅರ್ಪಿಸಿದರು ಮತ್ತು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.
ಘಟನೆ ಹಿನ್ನೆಲೆ
ನಿಮಿಷಾ ಪ್ರಿಯಾ ಕೇರಳ ಮೂಲದ ಭಾರತೀಯ ನರ್ಸ್ ಆಗಿದ್ದು, ಯೆಮನ್ನಲ್ಲಿ 2017 ರಲ್ಲಿ ಬ್ಯುಸಿನೆಸ್ ಪಾರ್ಟ್ನರ್ ಕೊಲೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು.
BIG BREAKING NEWS. Indian Nurse Nimisha Priya from Sanaa , Yemen Prison will be released . English & Telugu . pic.twitter.com/oAbX5LABly
— Dr KA Paul (@KAPaulOfficial) July 21, 2025