HomeIndiaBREAING : 'CBI' ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ಅರವಿಂದ್ ಕೇಜ್ರಿವಾಲ್..!

BREAING : ‘CBI’ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ಅರವಿಂದ್ ಕೇಜ್ರಿವಾಲ್..!

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಬಂಧನ ಮತ್ತು ರಿಮಾಂಡ್ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತನ್ನ ಬಂಧನ ಮತ್ತು ರಿಮಾಂಡ್ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿದ್ದ ಅಕ್ರಮ ಹಣ ವರ್ಗಾವಣೆ ಕೇಸ್ ತನಿಖೆಯಲ್ಲಿ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲು ಸೇರಿದ್ದರು. ಹೆಚ್ಚಿನ ತನಿಖೆಗಾಗಿ ಸಿಬಿಐ, ಅರವಿಂದ್ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಕೇಳಿತ್ತು. ತಿಹಾರ್ ಜೈಲಿನಿಂದ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿ ಮೂರು ದಿನಗಳ ಕಸ್ಟಡಿಗೆ ಪಡೆದಿದ್ದರು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಜುಲೈ 12ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular