HomeIndiaBIG NEWS : ಹರಿಯಾಣದಲ್ಲಿ 'ASI' ಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು..!

BIG NEWS : ಹರಿಯಾಣದಲ್ಲಿ ‘ASI’ ಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು..!

ನವದೆಹಲಿ: ಹರಿಯಾಣ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಅವರನ್ನು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಂಗಳವಾರ ತಡರಾತ್ರಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸಂಜೀವ್ ಕುಮಾರ್ (40) ಎಂದು ಗುರುತಿಸಲಾಗಿದ್ದು, ಯಮುನಾನಗರದ ರಾಜ್ಯ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.

ಅವರು ಕುಟೈಲ್ ಗ್ರಾಮದಲ್ಲಿರುವ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು. ತಲೆಗೆ ಎರಡು ಗುಂಡುಗಳು ತಗುಲಿದ್ದು, ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular