HomeLatest NewsBREAKING: ಬೆಂಗಳೂರಿನಲ್ಲಿ ಗೃಹಣಿ ಅನುಮಾನಾಸ್ಪದವಾಗಿ ಸಾವು

BREAKING: ಬೆಂಗಳೂರಿನಲ್ಲಿ ಗೃಹಣಿ ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುಪ್ರಿತಾ (27 ಮೃತ ಮಹಿಳೆ. ಮನೆಯಲ್ಲಿಯೇ ಸುಪ್ರಿತಾ ಅವರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 5 ವರ್ಷಗಳ ಹಿಂದೆ ಸುಪ್ರಿತಾ ಹಾಗೂ ಕಿರಣ್ ವಿವಾಹವಾಗಿದ್ದರು. ಕಿರಣ್ ಖಾಸಗಿ ಸಂಸ್ಥೆಯ ಸೇಲ್ಸ್ ಟೀಂ ನಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಮನೆಯಲ್ಲಿ ಕಿರಣ್ ಪತ್ನಿ ಸುಪ್ರಿತಾ ಶವವಾಗಿ ಪತ್ತೆಯಾಗಿದ್ದಾರೆ.

ಇದು ಕೊಲೆಯೋ ಆತ್ಮಹತ್ಯೆಯೋ ಎಂಬುದು ತನಿಖೆ ಬಳಿಕವೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಹೆಣ್ಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular