HomeLatest NewsBREAKING: ಭೀಕರ ಅಪಘಾತ: ಬಸ್ ನಿಲ್ದಾಣಕ್ಕೆ ನುಗ್ಗಿದ ಮಣ್ಣು ತುಂಬಿದ ಟಿಪ್ಪರ್: ಮೂವರು ಸ್ಥಳದಲ್ಲೇ ದುರ್ಮರಣ

BREAKING: ಭೀಕರ ಅಪಘಾತ: ಬಸ್ ನಿಲ್ದಾಣಕ್ಕೆ ನುಗ್ಗಿದ ಮಣ್ಣು ತುಂಬಿದ ಟಿಪ್ಪರ್: ಮೂವರು ಸ್ಥಳದಲ್ಲೇ ದುರ್ಮರಣ

ತಿರುವನಂತಪುರಂ: ವೇಗವಾಗಿ ಬಂದ ಮಣ್ಣು ತುಂಬಿದ್ದ ಟಿಪ್ಪರ್ ಲಾರಿಯೊಂದು ಬಸ್ ನಿಲ್ದಾಣಕ್ಕೆ ನುಗ್ಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೇರಳಂ ನ ಮಲಪ್ಪುರಂನಲ್ಲಿ ನಡೆದಿದೆ.

ಮಣ್ಣು ತುಂಬಿದ್ದ ಟಿಪ್ಪರ್ ಲಾರಿ ಮೊದಲಿಗೆ ಬುಲೆಟ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ನಿಲ್ದಾಣಕ್ಕೆ ನುಗ್ಗಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮಣ್ಣಿನಡಿ 8 ಜನರು ಸಿಲುಕಿಕೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರ ರಕ್ಷಣಾ ಕಾರ್ಯಾಚಾರಣೆ ನಡೆಸಲಾಗುತ್ತಿದೆ.

ಟಿಪ್ಪರ್ ಚಾಲಕನ ಅತಿಯಾದ ವೇಗವೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ಸಿಬ್ಬಂದಿಗಳು ದೌಡಾಯಿಸಿದ್ದು, ಮಣ್ಣಿನಡಿ ಸಿಲುಕಿದವರನ್ನು ಸುರಕ್ಷಿತವಾಗಿ ಹೊರತೆಗೆಯಲು ಯತ್ನಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular