ಶಿವಮೊಗ್ಗ: ಮಾಜಿ ಉಪಮುಖ್ಯಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕೆ.ಎಸ್. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಕಾಂತೇಶ್ ಅವರ ಪತ್ನಿ ಶಾಲಿನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈಶ್ವರಪ್ಪ, ಅವರ ಪುತ್ರ, ಸೊಸೆ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.
ಶಿವಮೊಗ್ಗದ ವಿನೋದ್ ಖಾಸಗಿ ದೂರು ದಾಖಲಿಸಿದ್ದು, ಶಿವಮೊಗ್ಗ ನ್ಯಾಯಾಲಯದ ಆದೇಶದಂತೆ ಕೇಸ್ ದಾಖಲಿಸಲಾಗಿದೆ. ನಾಳೆ ಬೆಳಗ್ಗೆ ಕಚೇರಿಗೆ ಬರುವಂತೆ ಲೋಕಾಯುಕ್ತ ಪೊಲೀಸರು ಸೂಚನೆ ನೀಡಿದ್ದಾರೆ. ಸದ್ಯ ಈಶ್ವರಪ್ಪ ಕುಟುಂಬ ಕೇರಳ ಪ್ರವಾಸದಲ್ಲಿದ್ದಾರೆ.