ಬೆಂಗಳೂರು : ಅತ್ಯಾಚಾರ ಆರೋಪದಡಿ ಕಿರುತೆರೆ ನಟ ಮಡೆನೂರು ಮನುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಮಡೆನೂರು ಮನುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ , ಕಿರುತೆರೆ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಈ ಕುರಿತು ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಿರುತೆರೆ ನಟಿ ಮಡೆನೂರು ಮನು ಮೇಲೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಕಿರುತೆರೆ ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
‘ ಕುಲದಲ್ಲಿ ಕೀಳ್ಯಾವೋದು ಸಿನಿಮಾ’ ನಾಳೆ ರಿಲೀಸ್ ಆಗಬೇಕಿದ್ದು, ಇದರ ನಡುವೆ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ.
ಮೌನಾ ಗುಡ್ಡೇಮನೆ ಹಾಗೂ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ಮಡೆನೂರು ಮನು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರ ನಾಳೆ ರಿಲೀಸ್ ಆಗಲಿದೆ. ನಿರ್ದೇಶಕ ಯೋಗರಾಜ್ ಭಟ್ ಬ್ಯಾನರ್ ನಲ್ಲಿ ಬರುತ್ತಿರುವ ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ಅಲ್ಲದೇ ಇತ್ತೀಚೆಗೆ ಮಡೆನೂರು ಮನು ಸಿನಿಮಾಕ್ಕಾಗಿ ಭಾರಿ ಪ್ರಚಾರ ಮಾಡಿದ್ದಾರೆ. ಇದೆಲ್ಲದರ ನಡುವೆ ಇದೀಗ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ.