ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ದುಷ್ಕರ್ಮಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಅಬ್ದುಲ್ ರೆಹಮಾನ್ ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ರಹಿಮಾನ್ ಹತ್ಯೆ ಖಂಡಿಸಿ ದುಷ್ಕರ್ಮಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಹಿನ್ನೆಲೆ ಪೊಲೀಸರು ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.ಜಿಲ್ಲೆಯಲ್ಲಿ ಪ್ರಮುಖ ಪ್ರದೇಶಗಳಲ್ಲಿ ಮೇ 30 ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಮರಳು ಸಾಗಾಟಕ್ಕೆಂದು ಹೋದಾಗ ಅಬ್ದುಲ್ ರೆಹಮಾನ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ.ದೀಪಕ್, ಸುಮಿತ್ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ನಿಸಾರ್ ಎಂಬುವವರು ದೂರು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. BNS ಕಾಯ್ದೆ 103,109, 118(1), 118 (2), 190 191(1), 191(2), 191(3) ರಡಿ ಪ್ರಕರಣ ದಾಖಲಾಗಿದೆ.