HomeIndiaBREAKING: ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸ್ಮೃತಿ ಇರಾನಿಗೆ ಭಾರಿ ಹಿನ್ನಡೆ

BREAKING: ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸ್ಮೃತಿ ಇರಾನಿಗೆ ಭಾರಿ ಹಿನ್ನಡೆ

ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರಿ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಕಿಶೋರಿಲಾಲ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಸ್ಮೃತಿ ಇರಾನಿ ಅವರಿಗಿಂತ 20,000ಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಮೊದಲು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಅಮೇಥಿ ಕ್ಷೇತ್ರವನ್ನು ಬಿಜೆಪಿ ತನ್ನ ವಶಕ್ಕೆ ಪಡೆದುಕೊಂಡಿತ್ತು. ಈ ಹಿಂದೆ ರಾಹುಲ್ ಗಾಂಧಿಯವರನ್ನು ಮಣಿಸಿ ಸ್ಮೃತಿ ಇರಾನಿ ಗೆಲುವಿನ ನಗೆ ಬೀರಿದ್ದರು. ಹೀಗಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಕಣಕ್ಕಿಳಿದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular