ಗುಜರಾತ್ : ಅಹಮದಾಬಾದ್ ಏರ್ ಪೋರ್ಟ್ ಬಳಿ ವಿಮಾನ ಪತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಸಾವು ನೋವಿನ ಸಂಖ್ಯೆ ಇನ್ನಷ್ಟೇ ತಿಳಿದು ಬರಬೇಕಿದೆ.
ಗುಜರಾತ್ನ ಮೇಧಾನಿ ನಗರದಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನವು ಏರ್ ಇಂಡಿಯಾದ್ದಾಗಿರಬಹುದು ಎಂದು ಹೇಳಲಾಗಿದೆ. ವಿಮಾನದಲ್ಲಿ 242 ಮಂದಿ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಸ್ಥಳಕ್ಕೆ ಧಾವಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿನಗರ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ.

