ಬೆಂಗಳೂರು: ಇಂಧನ ಖಾಲಿಯಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಜೂನ್ 19ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂಧನ ಖಾಲಿಯಾಗಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಅದೃಷ್ಟವಶಾತ್ ಮತ್ತೊಂದು ಭಾರಿ ಅನಾಹುತ ತಪ್ಪಿದೆ. ಗುವಾಹಟಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ಇಂಧನ ಖಾಲಿಯಾಗಿತ್ತು. 180 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಿಮಾನ ಇದಾಗಿದ್ದು, ಇಂಧನ ಖಾಲಿಯಾದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.