BREAKING: ಈ ಆರ್ಥಿಕ ವರ್ಷದಲ್ಲೇ `5 ಗ್ಯಾರಂಟಿ ಯೋಜನೆ’ ಜಾರಿ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಈ ಆರ್ಥಿಕ ವರ್ಷದಲ್ಲೇ 5 ಗ್ಯಾರಂಟಿ (Guarantee) ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ (Siddaramaiah)ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷದ ವತಿಯಿಂದ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವು. ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡ್ ಗಳಿಗೆ ಸಹಿ ಮಾಡಿದ್ದೇವೆ. ಗ್ಯಾರಂಟಿಗಳನ್ನು ನಾವು ಜಾರಿ ಮಾಡುತ್ತೇವೆ ಎಂದು ಮಾತುಗಳನ್ನು ಗ್ಯಾರಂಟಿ ಕಾರ್ಡ್ ಗಳ ಮೂಲಕ ಎಲ್ಲ ಮನೆಗಳಿಗೆ ಹಂಚಿಕೆ ಮಾಡಿದ್ದೇವು ಎಂದರು.

ರಾಜ್ಯ ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳು

ಗೃಹ ಜ್ಯೋತಿ

200 ಯುನಿಟ್ ಉಚಿತ ವಿದ್ಯುತ್ ಕೊಡುತ್ತೇವೆ. ಈ ಗ್ಯಾರಂಟಿ ಯೋಜನೆ ಜಾರಿಗೆ ತೀರ್ಮಾನ ಮಾಡಿದ್ದೇವೆ. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಅಷ್ಟು ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ. 12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್ ಶುಲ್ಕ ನಿಗದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ

ಗೃಹ ಲಕ್ಷ್ಮೀ ಯೋಜನೆ ಜಾರಿಗೆ ನಿರ್ಧರಿಸಿದ್ದೇವೆ. ಎಪಿಎಲ್ , ಬಿಪಿಎಲ್ ಸೇರಿದಂತೆ ಪಿಂಚಣಿ, ವಿಧವಾ ವೇತನಾ ಪಡೆಯುತ್ತಿರುವರಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆ. ಬ್ಯಾಂಕ್ ಅಕೌಂಟ್, ಆಧಾರ್ ಕಾರ್ಡ್ ಬೇಕು. ಮನೆಯ ಯಜಮಾನಿ ಅಕೌಂಟ್ ಗೆ 2,000 ರೂ. ಜಮೆ ಮಾಡುತ್ತೇವೆ. ಜೂನ್, 15 ರಿಂದ ಜುಲೈ 15 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಸಿದ್ದತೆ ಕೈಗೊಂಡು ಆಗಸ್ಟ್ 15 ಕ್ಕೆ ಮನೆಯ ಯಜಮಾನಿ ಅಕೌಂಟ್ ಗೆ 2,000 ರೂ. ಜಮೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆ

ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯಗಳನ್ನು 10 ಕೆಜಿ ಕೊಡುತ್ತೇವೆ. ಜುಲೈ 1 ರಿಂದ ಎಲ್ಲಾ ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ದಾರರಿಗೂ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆ

ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಜೂನ್ 11 ರಿಂದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ, ರಾಜ್ಯದ ಒಳಗಡೆ ಎಸಿ ಬಸ್ ಗಳನ್ನು ಬಿಟ್ಟು, ಎಲ್ಲಾ ಬಸ್ ಗಳಲ್ಲೂ ಉಚಿತ ಪ್ರಯಾಣ ಮಾಡಬಹುದು.

ಯುವನಿಧಿ

ಯುವನಿಧಿ ಯೋಜನೆಯಡಿ 22-23 ರಲ್ಲಿ ವ್ಯಾಸಂಗ ಮಾಡಿದ ಪದವೀಧರರು, ಡಿಪ್ಲೋಮಾ ಪದವೀಧರರಿಗೆ 24 ತಿಂಗಳವರೆಗೆ ಪ್ರತಿ ತಿಂಗಳು 3,000 ರೂ. ಡಿಪ್ಲೋಮಾ ಮಾಡಿದವರಿಗೆ 1,500 ರೂ. ಸಹಾಯಧನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read