
ರಾಮನಗರದ ಜಯಪುರ ಗೇಟ್ ಬಳಿ ಬೈಕ್ ವೊಂದು ಕೆಟ್ಟು ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಕೆಳಗೆ ಬಿದ್ದಿದ್ದು, ಅವರ ಮೇಲೆ ವೇಗವಾಗಿ ಬಂದ ಇನ್ನೊಂದು ಕಾರು ಹರಿದು ಹೋಗಿದೆ. ಅಪಘಾತದ ಭೀಕರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

