HomeLatest NewsBREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ 'ಥಗ್ ಲೈಫ್' ಸಿನಿಮಾ ರಿಲೀಸ್ ಗೆ...

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಅವಕಾಶ ನೀಡಲ್ಲ : ಫಿಲ್ಮ್ ಚೇಂಬರ್ ಎಚ್ಚರಿಕೆ

ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾ ರಿಲೀಸ್ ಗೆ ಅವಕಾಶ ನೀಡಲ್ಲ ಎಂದು ಫಿಲ್ಮ್ ಚೇಂಬರ್ ಎಚ್ಚರಿಕೆ ನೀಡಿದೆ.

ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಮಾತನಾಡಿ ಕಮಲ್ ಹಾಸನ್ ಅವರಿಂದ ಕ್ಷಮೆ ಕೇಳಿಸುತ್ತೇವೆ. ಅವರು ಕ್ಷಮೆ ಕೇಳದಿದ್ರೆ ಥಗ್ ಲೈಫ್ ಸಿನಿಮಾ ರಿಲೀಸ್ ಆಗಲು ಬಿಡಲ್ಲ. ಥಗ್ ಲೈಫ್ ಸಿನಿಮಾ ಕರ್ನಾಟಕದ ವಿತರಕ ವೆಂಕಟೇಶ್ ಅವರನ್ನು ಚೇಂಬರ್ ಗೆ ಕರೆಸಿ ಮಾತುಕತೆ ನಡೆಸಿದ್ದೇವೆ ಎಂದರು.

ಈ ಬಗ್ಗೆ ಸಾರಾ ಗೋವಿಂದು ಮಾತನಾಡಿ ಕಮಲ್ ಹಾಸನ್ ಮಾತನ್ನು ಸಹಿಸೋಕೆ ಸಾದ್ಯ ಇಲ್ಲ. ಇಂದು ನಾಳೆ ಒಳಗೆ ಕ್ಷಮೆಯಾಚಿಸದಿದ್ರೆ ಖಂಡಿತ ರಾಜ್ಯದಲ್ಲಿ ಅವರ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ ಎಂದಿದ್ದಾರೆ.
ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಬಹುಭಾಷಾ ನಟ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೇಳಿಕೆ ಹಿಂಪಡೆದು ಕನ್ನಡಿಗರ ಕ್ಷಮೆಯಾಚಿಸುವಂತೆ ಪಟ್ಟು ಹಿಡಿದಿದ್ದರು. ಕಮಲ್ ಹಾಸನ್ ಮೊಂಡಾಟಕ್ಕೆ ಸಿಡಿದೆದ್ದಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ನಟ ಕಮಲ್ ಹಾಸನ್ ವಿರುದ್ಧ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಯಾವುದೇ ಕಾರಣಕ್ಕೂ ಕಮಲ್ ಹಾಸನ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಕಮಲ್ ಹಾಸನ್ ದುರಹಂಕಾರಕ್ಕೆ ತಕ್ಕ ಉತ್ತರ ನೀಡುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಫಿಲ್ಮ್ ಚೇಂಬರ್ ಬಳಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಬಳಿಕ ಫಿಲ್ಮ್ ಚೇಂಬರ್ ಒಳಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಮಲ್ ಹಾಸನ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಅವರ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ. ತಕ್ಷಣ ಕಮಲ್ ಹಾಸನ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ ಇದು ಡಿಸ್ಟ್ರಿಬ್ಯೂಟರ್ ಗಳಿಗೂ ನೀಡುವ ಎಚ್ಚರಿಕೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular