BREAKING : ಕರ್ನಾಟಕದ 5 ಸೇರಿ ದೇಶದ 103 ‘ಅಮೃತ ರೈಲ್ವೆ ನಿಲ್ದಾಣ’ಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ |WATCH VIDEO

ಡಿಜಿಟಲ್ ಡೆಸ್ಕ್ : ರಾಜಸ್ಥಾನದ ಬಿಕನೇರ್ ಗೆ ಪ್ರಧಾನಿ ಮೋದಿ ಆಗಮಿಸಿದ್ದು, ರಾಜ್ಯದ 5 ಸೇರಿ 103 ಅಮೃತ ರೈಲ್ವೆ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗೊಂಡ 103 ರೈಲು ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ಇದು ಭಾರತೀಯ ರೈಲ್ವೆಯನ್ನು ಆಧುನೀಕರಿಸುವತ್ತ ಐತಿಹಾಸಿಕ ಹೆಜ್ಜೆಯಾಗಿದೆ.

ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಬಾಗಲಕೋಟೆ, ಗದಗ, ಬೆಳಗಾವಿ ಜಿಲ್ಲೆಯ ಗೋಕಾಕ್ ರಸ್ತೆ ಮತ್ತು ಧಾರವಾಡ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣ ಯೋಜನೆ(ಎಬಿಎಸ್ಎಸ್) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 86 ಜಿಲ್ಲೆಗಳಲ್ಲಿ 103 ಅಮೃತ್ ನಿಲ್ದಾಣಗಳನ್ನು 1,100 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ತಡರಾತ್ರಿ ರೈಲು ಪ್ರಯಾಣ ಇದ್ದರೆ ಪ್ರಯಾಣಿಕರು ನಿಲ್ದಾಣದಲ್ಲಿಯೇ ತಂಗಲು ವ್ಯವಸ್ಥೆ ಕಲ್ಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read