ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಇಂದು ಪ್ರಕಟವಾಗಿದೆ.
2024-25 ನೇ ಸಾಲಿನ ದ್ವಿತೀಯ ಪಿ.ಯುಸಿ-2. ಫಲಿತಾಂಶವು ಇಂದು ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ-೨ ರಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ನನ್ನ ತುಂಬು ಹೃದಯದ ಅಭಿನಂದನೆಗಳು! ಅಪೂರ್ಣ ಫಲಿತಾಂಶ ಬಂದಲ್ಲಿ, ನೀವು ಧೃತಿಗೆಡಬೇಡಿ. ಪರೀಕ್ಷೆ-೩ ಕ್ಕೆ ಯಾವುದೇ ಶುಲ್ಕವಿಲ್ಲದೆ ನೋಂದಾಯಿಸಿಕೊಳ್ಳಬಹುದು. ನಿಮ್ಮ ಪ್ರಯತ್ನವನ್ನು ಮುಂದುವರಿಸಿ, ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತದೆ. ಪರೀಕ್ಷೆ-೩ ರ ಸದುಪಯೋಗ ಪಡೆದುಕೊಳ್ಳಿ. ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ 3ನೇ ಪರೀಕ್ಷೆಯನ್ನು ದಿನಾಂಕ 09-06-2025ರಿಂದ 20-06-2025ರವರೆಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.