ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿದೆ.ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.
ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಗೆ ಟಾಪರ್ ಆಗಿದ್ದು , ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿ ಮೊದಲ ಸ್ಥಾನ ಪಡೆದಿದ್ದಾರೆ. ಅವರು 600 ಕ್ಕೆ 599 ಅಂಕಗಳನ್ನು ಪಡೆದಿದ್ದಾರೆ. ಹಾಗೂ ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ 597 ಅಂಕ ಪಡೆದಿದ್ದಾರೆ.
ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ಮಧ್ಯಾಹ್ನ 1.30ರ ಬಳಿಕ ವೀಕ್ಷಿಸಬಹುದು. ಫಲಿತಾಂಶದ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ – 3 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ.