HomeCrimeBREAKING: ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

BREAKING: ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ವಿಜಯಪುರ: ಮಹಿಳಾ ಕಾರ್ಪೊರೇಟರ್ ಪತಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಹೈದರ್ ಅಲಿ ನದಾಫ್ ಹತ್ಯೆಯಾದ ದುರ್ದೈವಿ. ಹೈದರ್ ಅಲಿ ನದಾಪ್ ವಾರ್ಡ್ ನಂಬರ್ 19ರ ಪಕ್ಷೇತರ ಪಾಲಿಕೆ ಸದಸ್ಯೆ ನಿಶಾತ್ ಅವರ ಪತಿ. ಹೈದರ್ ಅಲಿ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಜಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular