ಉಡುಪಿ: ಕಾರ್ ನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ನಡೆದಿದೆ.
ಎನ್.ಆರ್. ದಿಲೀಪ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಸಹೋದರ ದಿಲೀಪ್ ಕಾರ್ ನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.