BREAKING: ಕಾಲ್ತುಳಿತ ಪ್ರಕರಣ: ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ ಫ್ರಾಂಚೈಸಿ, ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್, ಕೆ.ಎಸ್.ಸಿ.ಎ. ಆಡಳಿತ ಮಂಡಳಿ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಇದೀಗ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಿಸಲಾಗಿದೆ. ಈಗಾಗಲೇ ಆರ್‌ಸಿಬಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಅದೇ ಎಫ್ಐಆರ್ ಜೊತೆಗೆ ದೂರನ್ನು ಪರಿಗಣಿಸುವುದಾಗಿ ಹಿಂಬರಹ ನೀಡಲಾಗಿದೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಗೆ ನೈಜ ಹೋರಾಟಗಾರರ ವೇದಿಕೆಯಿಂದ ದೂರು ನೀಡಲಾಗಿದೆ. ವೇದಿಕೆಯ ಹೆಚ್.ಎಂ. ವೆಂಕಟೇಶ್ ದೂರು ನೀಡಿದ್ದು, ಪೊಲೀಸರು ದೂರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read