HomeKarnatakaBREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ

BREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿದೆ. ಬಿಜೆಪಿ, ಜೆಡಿಎಸ್ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸುವ ವೇಳೆ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿದೆ.

ಇದರಿಂದಾಗಿ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿದ ಅವರು ಸ್ಥಳದಿಂದ ತೆರಳಿದ್ದಾರೆ. ನಿರಂತರವಾಗಿ ಅವರ ಮೂಗಿನಿಂದ ರಕ್ತ ಸೋರಿಕೆಯಾಗಿದೆ. ಇದೇ ವೇಳೆ ಕುಮಾರಸ್ವಾಮಿ ಅವರ ಪಕ್ಕದಲ್ಲಿ ನಿಖಿಲ್ ಕುಮಾರಸ್ವಾಮಿ, ಯಡಿಯೂರಪ್ಪ ಅವರು ನಿಂತಿದ್ದರು.

ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಟದ ಬಗ್ಗೆ ಸಭೆ ನಡೆಸಿದ ನಂತರ ಈ ಘಟನೆ ನಡೆದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಅವರ ಮೂಗಿನಿಂದ ರಕ್ತ ಸೋರಿ ಅಂಗಿ ಮೇಲೆ ಬಿದ್ದಿದೆ. ಇದನ್ನು ಗಮನಿಸಿದ ಕೂಡಲೇ ಕುಮಾರಸ್ವಾಮಿ ಕರವಸ್ತ್ರದಿಂದ ಒರೆಸಿಕೊಂಡಿದ್ದು, ನಿರಂತರವಾಗಿ ಮೂಗಿನಿಂದ ರಕ್ತ ಸೋರಿದೆ. ರಕ್ತಸ್ರಾವ ಹೆಚ್ಚಾಗುತ್ತಿದ್ದಂತೆ ಅಲ್ಲಿದ್ದ ಆಪ್ತರು ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular