ನವದೆಹಲಿ : ಕೇತಗಾನಹಳ್ಳಿ ಒತ್ತುವರಿ ತೆರವು ಕೇಸ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆಹೋದ ಹೆಚ್ಡಿಕೆಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಪಂಕಜ್ ಮಿಥಲ್ ಹಾಗೂ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ನ್ಯಾಯಾಂಗ ನಿಂದನೆ ಕೇಸ್ ವಿಚಾರಣೆಗೆ ತಡೆ ನೀಡಿದೆ.
TAGGED:H.D ಕುಮಾರಸ್ವಾಮಿ