HomeLatest NewsBREAKING: ಕೊಪ್ಪಳ ಜಿಲ್ಲಾಧಿಕಾರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

BREAKING: ಕೊಪ್ಪಳ ಜಿಲ್ಲಾಧಿಕಾರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

ಕೊಪ್ಪಳ: 2025-26ನೇ ಸಾಲಿನಲ್ಲಿ ಆಚರಿಸಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜನವರಿ 19 ರಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ.

ಭಾರತ ಚುನಾವಣಾ ಆಯೋಗದಿಂದ ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯಗಳಲ್ಲಿ ಹಾಗೂ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯಗಳಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಮತದಾರರ ನೋಂದಣಾಧಿಕಾರಿಗಳಿಗೆ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ, ಬಿಎಲ್‌ಓ ಮೇಲ್ವಿಚಾರಕರಿಗೆ ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇದರೊಂದಿಗೆ 64-ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ:208 ರ ಬೂತ್ ಮಟ್ಟದ ಅಧಿಕಾರಿಯಾದ ಹಿರೇಬಗನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ಸತೀಶಚಂದ್ರ ಇವರಿಗೆ ಉತ್ತಮ ಬೂತ್ ಮಟ್ಟದ ಅಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಶಸ್ತಿಗೆ ಆಯ್ಕೆಯಾದ ಅಧಿಕಾರಿ, ಸಿಬ್ಬಂದಿಗಳಿಗೆ ಜನವರಿ 25 ರಂದು ಬೆಂಗಳೂರಿನ ಶ್ರೀ ಪುಟ್ಟಣ್ಣಚೆಟ್ಟಿ ಟೌನ್‌ಹಾಲ್‌ನಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಸಂದರ್ಭದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡುವರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular