ಮಂಗಳೂರು : ‘ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ’ , ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಧರ್ಮ ವಿರೋಧಿ ಪೋಸ್ಟ್ ಹಾಕಿದ್ದ ವೈದ್ಯೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಆಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡು ಉದ್ಧಟತ ಮೆರೆದಿದ್ದಾಳೆ. ಈ ಸಂಬಂಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಆಕೆಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಯುವತಿ ‘ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ನಾನು ಭಾರತೀಯಳು, ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಆಸಿಫಾ ಪೋಸ್ಟ್ ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆಸ್ಪತ್ರೆಯಿಂದ ವಜಾಗೊಳಿಸಲಾಗಿದೆ. ಐಲ್ಯಾಂಡ್ ಆಸ್ಪತ್ರೆ ಹೆಚ್ ಆರ್ ಮೊಹಮದ್ ಅಸ್ಸಾಂ ದೂರು ಆಧರಿಸಿ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

https://www.facebook.com/photo/?fbid=9576014222494683&set=pcb.9576017455827693