HomeIndiaBREAKING: ಕೋಚಿಂಗ್ ಸೆಂಟರ್ ನಲ್ಲಿ ಬೆಂಕಿ ಅವಘಡ; ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಟ್ಟಡ

BREAKING: ಕೋಚಿಂಗ್ ಸೆಂಟರ್ ನಲ್ಲಿ ಬೆಂಕಿ ಅವಘಡ; ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಟ್ಟಡ

ನವದೆಹಲಿ: ಬಹುಮಹಡಿ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಕೋಚಿಂಗ್ ಸೆಂಟರ್ ಹೊತ್ತಿ ಉರಿದ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ.

ಮುಖರ್ಜಿ ಸೆಂಟರ್ ನ ಮೂರನೆ ಮಹಡಿಯ ಕೊಚಿಂಗ್ ಸೆಂಟರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಕಟ್ಟಡದ ತುಂಬಲ್ಲಾ ವ್ಯಾಪಿಸಿದೆ. ಕೋಚಿಂಗ್ ಸೆಂಟರ್ ನಲ್ಲಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಜೀವ ಉಳಿಸಿಕೊಳ್ಳಲು ಪರದಾಟ ನಡೆಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಹಗ್ಗದ ಸಹಾಯದಿಂದ ಕಿಟಕಿ ಮೂಲಕವಾಗಿ ಕೋಚಿಂಗ್ ಸೆಂಟರ್ ನಿಂದ ವಿದ್ಯಾರ್ಥಿಗಳನ್ನು ಕೆಳಗಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. 11 ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular