ಕಲಬುರಗಿ: ಗಾಣಗಾಪುರದ ದತ್ತಾತ್ರೇಯ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೆ ಮಹಿಳೆ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ.
ಬೀದರ್ ಜಿಲ್ಲೆ ಬಸವಕಲ್ಯಾಣ ಮೂಲದ ಕಲಾವತಿ(50) ಮೃತಪಟ್ಟವರು ಎಂದು ಹೇಳಲಾಗಿದೆ. ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಕಲಾವತಿ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಬಂದಿದ್ದರು. ದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟಿದ್ದಾರೆ.
ರಾಜ್ಯ ಮಾತ್ರವಲ್ಲದೇ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬಂದಿದ್ದ ಹಿನ್ನೆಲೆಯಲ್ಲಿ ಗಾಣಗಾಪುರದ ದತ್ತಾತ್ರೇಯ ದೇವಾಲಯದಲ್ಲಿ ನೂಕುನುಗ್ಗಲು ಉಂಟಾಗಿ ಕಲಾವತಿ ಮೃತಪಟ್ಟಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.