ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಬೆಂಗಳೂರಿನ ಅರ್ಕಾವತಿ ಬಡಾವಣೆಯ ಫ್ಲ್ಯಾಟ್, ಆನೇಕಲ್ ನ ಕೃಷಿ ಭೂಮಿ, ತುಮಕೂರಿನ ಕೈಗಾರಿಕಾ ಪ್ರದೇಶದ ಜಮೀನುಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿದ್ದು, ಮೇ ತಿಂಗಳಲ್ಲಿ ರನ್ಯಾ ರಾವ್ ಅವರಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು. ಇಡಿ ಅಧಿಕಾರಿಗಳ ತನಿಖೆಯ ಸಂದರ್ಭದಲ್ಲಿ ಸಾಕಷ್ಟು ಅಂಶಗಳು ಬೆಳಕಿಗೆ ಬಂದಿದ್ದವು. ಇದೀಗ 34.12 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎನ್ನಲಾಗಿದೆ.