ಮೈಸೂರು : ವಿದ್ಯುತ್ ಬೆಲೆ ಏರಿಕೆ(Electricity price hike), ಗೋಹತ್ಯೆ ನಿಷೇಧ ಕಾಯ್ದೆ ರದ್ದು ನಿರ್ಧಾರ ವಿರೋಧಿಸಿ ಇಂದು ಮೈಸೂರಿ (Mysore )ನಲ್ಲಿ ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರಿನ ಜಿ.ಪಂ ಕಚೇರಿಯ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದು ನಿರ್ಧಾರ, ಹಾಲಿನ ಪ್ರೋತ್ಸಾಹಧನ ಕಡಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
200 ಯೂನಿಟ್ ವರೆಗೆ ಉಚಿತ ವಿದ್ಯುತ್ ಗೆ ಷರತ್ತು ಅನ್ವಯ, ವಿದ್ಯುತ್ ಶುಲ್ಕ ಏರಿಕೆ ಹಾಗೂ ಹಾಲಿನ ಪ್ರೋತ್ಸಾಹಧನ ಕಡಿತ ಮಾಡಿರುವ ನಿರ್ಧಾರಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಸೋಮವಾರ ಹಾಗೂ ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ.