HomeKarnatakaBREAKING: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

BREAKING: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆ ಮಾಡುತ್ತಿದೆ. ಈ ಹಿಂದೆ ಬಿಜೆಪಿ ಸರ್ಕಾರ ಮರು ತನಿಖೆಗೆ ಆದೇಶ ನೀಡಿತ್ತು. ಆದರೆ ಪ್ರಕರಣದ ಮರು ತನಿಖೆಯಾಗಿದೆಯೇ? ತನಿಖಾ ವರದಿ ಏನಾಗಿದೆ? ಯಾವುದರ ಬಗ್ಗೆಯೂ ಮಾಹಿತಿ ಇಲ್ಲ. ಹಾಗಾಗಿ ನಮ್ಮ ಸರ್ಕಾರ ಮತ್ತೊಮ್ಮೆ ಮರುತನಿಖೆಗೆ ಆದೇಶ ನೀಡಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋವಿಡ್ ಸಂದರ್ಭದಲ್ಲಿ 2021ರ ಮೇ 2ರಂದು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 36 ರೋಗಿಗಳು ಆಕ್ಸಿಜನ್ ಪೂರೈಕೆಯಾಗದೇ ಸಾವನ್ನಪ್ಪಿದ್ದರು. ಈ ದುರಂತ ರಾಷ್ಟ್ರ ಮಟ್ಟದಲ್ಲಿ ತೀವ್ರ ಸುದ್ದಿಯಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular