ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೋಡಿಹಳ್ಳಿ ಸಮೀಪ ರಸ್ತೆ ತಿರುವಿನಲ್ಲಿಯೇ ಟ್ಯಾಂಕರ್ ಪಲ್ಟಿಯಾಗಿ ಅಡ್ಡಲಾಗಿ ಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು, ತರೀಕೆರೆ ಉಪ ವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ಸಿಬ್ಬಂದಿ ಹರಸಾಹಸ ನಡೆಸಿದ್ದಾರೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸಂಚಾರಕ್ಕೆ ತೊಂದರೆಯಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.