BREAKING: ಚುನಾವಣಾ ಆಯೋಗದ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳು ಎದ್ದಿವೆ: CWC ಸಭೆಯಲ್ಲಿ ಖರ್ಗೆ ಸ್ಪೋಟಕ ಹೇಳಿಕೆ

ಬೆಳಗಾವಿ: ಬಿಜೆಪಿಯವರು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಳಗಾವಿಯ ವೀರಸೌಧದಲ್ಲಿ ನಡೆದ CWC ಸಭೆಯಲ್ಲಿ ಅವರು ಮಾತನಾಡಿ, ಚುನಾವಣಾ ಆಯೋಗದ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಜನರ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿರುವುದು ಕಳವಳಕಾರಿಯಾಗಿದೆ. ಕೆಲವು ದಿನಗಳ ಹಿಂದೆ ಅವರು ಕೋರ್ಟ್ ಆದೇಶದ ಮಾಹಿತಿಯನ್ನು ಹಂಚಿಕೊಳ್ಳಲು ಚುನಾವಣಾ ನಿಯಮಗಳನ್ನು ಬದಲಾಯಿಸಿದರು ಎಂದು ದೂರಿದ್ದಾರೆ.

ಕೆಲವೊಮ್ಮೆ ಮತದಾರರ ಹೆಸರು ಪಟ್ಟಿಯಿಂದ ಅಳಿಸಿ ಹೋಗುವುದು, ಕೆಲವೊಮ್ಮೆ ಮತದಾನ ಮಾಡದಂತೆ ತಡೆಯುವುದು, ಕೆಲವೊಮ್ಮೆ ಪಟ್ಟಿಯಲ್ಲಿ ಮತದಾರರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗುವುದು, ಕೊನೆಯ ಕ್ಷಣದಲ್ಲಿ ಅನಿರೀಕ್ಷಿತವಾಗಿ ಮತದಾನದ ಪ್ರಮಾಣ ಹೆಚ್ಚಾಗುವುದು… ಈ ರೀತಿ ಕೆಲವು ಪ್ರಶ್ನೆಗಳು ಉದ್ಭವಿಸುತ್ತವೆ. ಆದರೆ ಇವುಗಳಿಗೆ ಯಾವುದೇ ತೃಪ್ತಿಕರ ಉತ್ತರ ಕಂಡುಬಂದಿಲ್ಲ ಎಂದು ಖರ್ಗೆ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read