BREAKING: ಜಾತಿಗಣತಿ ನಡೆಸುವ ಕೇಂದ್ರದ ನಿರ್ಧಾರಕ್ಕೆ ರಾಹುಲ್ ಗಾಂಧಿ ಸ್ವಾಗತ: ಸಮೀಕ್ಷೆಯ ವಿವರ, ಬಜೆಟ್ ನಲ್ಲಿ ಹಣ ಮೀಸಲಿಡಲು ಒತ್ತಾಯ | Caste Census

ನವದೆಹಲಿ: ಕೇಂದ್ರ ಸರ್ಕಾರ ಜಾತಿ ಗಣತಿ ನಡೆಸಲು ಮುಂದಾಗಿದ್ದು ಸ್ವಾಗತಾರ್ಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜಾತಿಗಣತಿ ಮಾಡಿದ್ದೇವೆ. ಕೇಂದ್ರ ಸರ್ಕಾರ 11 ವರ್ಷಗಳ ನಂತರ ಜಾತಿ ಗಣತಿಗೆ ಮುಂದಾಗಿದೆ. ಜಾತಿ ಗಣತಿ ಸರ್ವೆ ನಡೆಸಲು ಎಷ್ಟು ದಿನ ತೆಗೆದುಕೊಳ್ಳುತ್ತೀರಾ ಎಂಬುದನ್ನು ಸ್ಪಷ್ಟಪಡಿಸಬೇಕು. ಜಾತಿಗಣತಿಗೆ ಬಜೆಟ್ ನಲ್ಲಿ ಹಣ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ.

ಜಾತಿಗಣತಿ ನಡೆಸುವಂತೆ ನಮ್ಮ ಬೇಡಿಕೆಯನ್ನು ಮೊದಲು ನಿರಾಕರಿಸಿದ್ದರು. ಈಗ ನಮ್ಮ ಯೋಜನೆಯನ್ನು ಕೇಂದ್ರ ಸರ್ಕಾರ ಅಳವಡಿಸಿಕೊಂಡಿದೆ. ತೆಲಂಗಾಣ ಕಾಂಗ್ರೆಸ್ ಸರ್ಕಾರ ನಡೆಸಿರುವ ಜಾತಿ ಗಣತಿ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಯಾವ ತರಹದ ಸಮೀಕ್ಷೆ ಮಾಡುತ್ತೀರಾ ಎಂದು ಗೊತ್ತಾಗಬೇಕು. ಜಾತಿ ಜನಗಣತಿಯ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read