ದಾವಣಗೆರೆ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ದಾವಣಗೆರೆಯಲ್ಲಿ ಮಾತನಾಡಿ, ಸೆಪ್ಟೆಂಬರ್ ಒಳಗೆ ಮೀಸಲಾತಿ ಕ್ಷೇತ್ರ ಮರು ವಿಂಗಡಣೆ ಮಾಡುತ್ತೇವೆ. ಅಕ್ಟೋಬರ್, ನವೆಂಬರ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ವರ್ಷದಲ್ಲೇ ಎಲ್ಲಾ ಚುನಾವಣೆಗಳನ್ನು ನಡೆಸಲು ಸಿದ್ಧತೆ ಮಾಡುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.

