ಹಾವೇರಿ : ಜೈಲಿನಿಂದ ರಿಲೀಸ್ ಆಗಿ ‘ರೋಡ್ ಶೋ’ ನಡೆಸಿದ್ದ ಹಾನಗಲ್ ಗ್ಯಾಂಗ್ ಆರೋಪಿಗಳ ಜಾಮೀನು ರದ್ದಾಗಿದ್ದು, ಮತ್ತೆ ಅಂದರ್ ಆಗಿದ್ದಾರೆ.
ಹೌದು, ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು., ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ರಸ್ತೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು, ವೀಡಿಯೋ ವೈರಲ್ ಆಗಿ ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಚಾರ ಅರಿತ ಕೋರ್ಟ್ ಎಲ್ಲಾ 7 ಆರೋಪಿಗಳ ಜಾಮೀನು ರದ್ದುಪಡಿಸಿದೆ. ಪೊಲೀಸರು ಎಲ್ಲಾ 7 ಆರೋಪಿಗಳನ್ನು ಬಂಧಿಸಿ ಮತ್ತೆ ಜೈಲಿಗೆ ಕಳುಹಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳು 5 ಕಾರುಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು, ಈ ವಿಚಾರ ಆಕ್ರೋಶಕ್ಕೆ ಕಾರಣವಾಗಿತ್ತು. ಹಲವಾರು ಕಾರುಗಳು ಮತ್ತು ಬೈಕ್ಗಳನ್ನು ಒಳಗೊಂಡಿದ್ದ ಮೆರವಣಿಗೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಘಟನೆ ವ್ಯಾಪಕ ಖಂಡನೆಗೆ ಗುರಿಯಾಯಿತು.
4 ದಿನಗಳ ಹಿಂದೆ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಹಾವೇರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆ ಆರೋsನು ಮಂಜೂರು ಮಾಡಿತ್ತು. ಆರೋಪಿ ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಸಮೀವುಲ್ಲಾ ಲಾಲನವರ್, ಮಹಮ್ಮದ್ ಸಾದಿಕ್, ಶೋಯಿಬ್ ಮುಲ್ಲಾ, ತೌಸಿಪ್ ಚೋಟಿ, ರಿಯಾಜ್ ಸಾವಿಕೇರಿಗೆ ಜಾಮೀನು ಮಂಜೂರಾಗಿದೆ.2024ರ ಜ.8ರಂದು ಹಾನಗಲ್ ಹೊರವಲಯದಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜೈಲು ಸೇರಿದ್ದ 19 ಆರೋಪಿಗಳಲ್ಲಿ 12 ಆರೋಪಿಗಳು ಹತ್ತು ತಿಂಗಳ ಹಿಂದೆಯೇ ಜಾಮೀನು ಪಡೆದಿದ್ದರು.

