ಚಾಮರಾಜನಗರ: ಟೈಯರ್ ಸ್ಪೋಟಗೊಂಡು ಸಾರಿಗೆ ಬಸ್ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯ ಬೈಪಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಕೊಳ್ಳೇಗಾಲದ ಪುಟ್ಟನಂಜಮ್ಮ(60), ಕುದೇರು ನಿವಾಸಿ ಮಹೇಶ್(50) ಮೃತಪಟ್ಟವರು ಎಂದು ಗುರುತಿಸಲಾಗಿದೆ. 50ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 10ಕ್ಕೂ ಹೆಚ್ಚು ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

