
ಎರಡು ದಿನಗಳ ಹಿಂದೆ ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಅಪ್ಪಳಿಸಿದ ಪರುಣಾಮ ಹೆಲಿಕಾಪ್ಟರ್ ಗಾಜುಗಳು ಪುಡಿ ಪುಡಿಯಾಗಿದ್ದವು.
ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಅನಾಹುತ ಕ್ಷಣಾರ್ಧದಲ್ಲಿ ತಪ್ಪಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.
ಡಿ.ಕೆ.ಶಿವಕುಮಾರ್ ಆಗಮಿಸಿದ್ದ ಹೆಲಿಕಾಪ್ಟರ್ ಲ್ಯಾಂಡ್ ಮಾಡಲಾಗಿದ್ದ ಜಾಗದ ಪಕ್ಕದಲ್ಲಿಯೇ ಈ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್ ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ ನಿಂದಾಗಿ ಒಣಗಿದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಎಚ್ಚೆತ್ತು ಬೆಂಕಿ ನಂದಿಸಿ, ಆಗಬಹುದಾಗಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.

