HomeKarnatakaBREAKING: ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

BREAKING: ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ನ್ನು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ಡಿ.ಕೆ. ಶಿವಕುಮಾರ್, ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಳಬಾಗಿಲು ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್ ಹಾರಾಟದ ವೇಳೆ ರಣಹದ್ದು ಬಡಿದ ಪರಿಣಾಮವಾಗಿ ಹೆಲಿಕಾಪ್ಟರ್ ನ ಮುಂದಿನ ಗಾಜುಗಳು ಪುಡಿ ಪುಡಿಯಾಗಿದೆ. ಅದೃಷ್ಟವಶಾತ್ ಡಿ.ಕೆ. ಶಿವಕುಮಾರ್ ಹಾಗೂ ಹೆಲಿಕಾಪ್ಟರ್ ನಲ್ಲಿದ್ದ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಡಿ.ಕೆ. ಶಿವಕುಮಾರ್ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

For Latest News Updates, Join Our Whatsapp Community🚩
RELATED ARTICLES

Most Popular