ಬೆಂಗಳೂರು : ಡೀಸೆಲ್ ಬೆಲೆ ಏರಿಕೆಗೆ ಖಂಡನೆ ವ್ಯಕ್ತವಾಗಿದ್ದು, ಏ.14 ರ ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ.ಇಂದು ಸಭೆ ನಡೆಸಿದ ಲಾರಿ ಮಾಲೀಕರ ಸಂಘ ಏ.14 ರ ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರಕ್ಕೆ ಕರೆ ನೀಡಿದೆ.
ಡೀಸೆಲ್ ಬೆಲೆ ಏರಿಕೆಯನ್ನು ಕೂಡಲೇ ಮರುಪರಿಶೀಲನೆ ಮಾಡಿ ಕಡಿಮೆ ಮಾಡಬೇಕು. ಬೆಲೆ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಮುಷ್ಕರ ಮಾಡುವುದಾಗಿ ಕರೆ ನೀಡಿದ್ದರು. ರಸ್ತೆಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಸರ್ಕಾರ ಯಾವುದೇ ರೀತಿ ಸ್ಪಂದನೆ ವ್ಯಕ್ತಪಡಿಸದ ಹಿನ್ನೆಲೆ ಏ.14 ರ ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರಕ್ಕೆ ಕರೆ ನೀಡಿದೆ.ಲಾರಿ ಮುಷ್ಕರದ ಹಿನ್ನೆಲೆ ದಿನನಿತ್ಯ ವಸ್ತುಗಳ ಸರಬರಾಜಿನಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2 ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ದರ ಏರಿಕೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಿದ್ದೇವೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗ ಹೇಳಿದ್ದಾರೆ.