HomeKarnatakaBREAKING: ತುಂಗಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಉಪನ್ಯಾಸಕರು ದುರ್ಮರಣ

BREAKING: ತುಂಗಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಉಪನ್ಯಾಸಕರು ದುರ್ಮರಣ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ದುರಂತ ಅಂತ್ಯಕಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

38 ವರ್ಷದ ಪುನೀತ್ ಹಾಗೂ 36 ವರ್ಷದ ಬಾಲಾಜಿ ಮೃತ ಉಪನ್ಯಾಸಕರು. ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾಗಿದ್ದ ಇಬ್ಬರೂ ವೀಕೆಂಡ್ ಹಿನ್ನೆಲೆಯಲ್ಲಿ ನಿನ್ನೆ ಪ್ರವಾಸಕ್ಕಾಗಿ ಬಂದಿದ್ದು, ಹೋಮ್ ಸ್ಟೇನಲ್ಲಿ ತಂಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ತುಂಗಾ ನದಿಯಲ್ಲಿ ಈಜಲು ಹೋಗಿದ್ದಾಗ ಇಬ್ಬರೂ ನೀರು ಪಾಲಾಗಿದ್ದಾರೆ. ತೀರ್ಥಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular