HomeLatest NewsBREAKING: ದೆಹಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

BREAKING: ದೆಹಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಕೆಲ ದಿನಗಳ ಹಿಂದಷ್ಟೇ ದೆಹಲಿಯ ಒಂಭತ್ತು ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿತ್ತು.

ಇದೀಗ ಮತ್ತೆ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬೆಳಿಗ್ಗೆ 9;13ರ ಸುಮಾರಿಗೆ ಜಾಂದೇವಾಲನ್ ನಲ್ಲಿರುವ ಬಿಡಿ ತಮಿಳ್ ಎಜುಕೇಷನ್ ಸ್ಕೂಲ್ ಗೆ ಬಾಂಬೆ ಬೆದರಿಕೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಶಾಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಇದೇ ವೇಳೆ ದೆಹಲಿಯ ಹಲವು ಶಾಲೆಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ತಿಳಿದುಬಂದಿದೆ.

ದೆಹಲಿಯ ಹಲವು ಶಾಲೆಗಳಿಗೆ ದುಷ್ಕರ್ಮಿಗಳು ಪದೇ ಪದೇ ಬಾಂಬ್ ಬೆದರಿಕೆ ಹಾಕುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿಯೂ ಆತಂಕವನ್ನುಂಟು ಮಾಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular