ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯಲ್ಲಿ 33.50 ರೂ. ಇಳಿಕೆ ಮಾಡಿದ್ದು, ಪರಿಷ್ಕೃತ ದರಗಳು ಗುರುವಾರದಿಂದ ಜಾರಿಗೆ ಬಂದಿವೆ.
ತೈಲ ಮಾರುಕಟ್ಟೆ ಕಂಪನಿಗಳು ಇತ್ತೀಚಿನ ಮಾಸಿಕ ಪರಿಷ್ಕರಣೆ ಮಾಡಿದ ನಂತರ ದೇಶಾದ್ಯಂತ ವಾಣಿಜ್ಯ ಗ್ರಾಹಕರಿಗೆ ಬೆಲೆ ಕಡಿತ ಮಾಡಿರುವುದರಿಂದ ಅನುಕೂಲವಾಗಲಿದೆ.
ಆಗಸ್ಟ್ 1 ರಿಂದ ಹೊಸ ಬೆಲೆಗಳು ಜಾರಿಗೆ ಬರಲಿವೆ.
ರಾಷ್ಟ್ರ ರಾಜಧಾನಿಯಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆ ಈಗ 1,631.50 ರೂ. ಆಗಿರುತ್ತದೆ.
ಆದರೆ, 14.2 ಕೆಜಿ ಗೃಹಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
TAGGED:ವಾಣಿಜ್ಯ ಎಲ್‌ಪಿಜಿ ಸಿಲಿಂಡರ್