ಬೆಂಗಳೂರು : ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಆದ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಅವರನ್ನ ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಭೇಟಿಯಾಗಿದ್ದಾರೆ.
ಸದಾಶಿವನಗರದ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಪ್ರಣವ್ ಮೊಹಂತಿ ಕೆಲವು ಹೊತ್ತು ಚರ್ಚೆ ನಡೆಸಿದ್ದಾರೆ. 6 ನೇ ಪಾಯಿಂಟ್ ನಲ್ಲಿ ಸಿಕ್ಕ ಅಸ್ಥಿಪಂಜರದ ಬಗ್ಗೆ ಮಾಹಿತಿ ನೀಡಲು ಮೊಹಂತಿ ಪರಂ ಮನೆಗೆ ಧಾವಿಸಿದ್ದಾರೆ ಎಂದು ಹೇಳಲಾಗಿದ್ದು, ಇಬ್ಬರ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.