ಧರ್ಮಸ್ಥಳ : ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಪತ್ತೆಯಾದ ಮೂಳೆಗಳನ್ನು ವಶಕ್ಕೆ ಪಡೆದ ಎಸ್ ಐ ಟಿ ಬ್ಯಾಗ್ ನಲ್ಲಿ ತುಂಬಿಕೊಂಡು ಹೋಗಿದೆ.
ಬಂಗ್ಲೆಗುಡ್ಡ ಕಾಡಿನಲ್ಲಿ ಎಸ್ ಐ ಟಿ ಶೋಧ ನಡೆಸುವಾಗ ಮೂಳೆಗಳು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಠಲಗೌಡನ ಕರೆತರದೇ ಎಸ್ ಐ ಟಿ ಶೋಧ ನಡೆಸುತ್ತಿದ್ದು, ಎಸ್ ಐ ಟಿ ನಡೆ ಬಹಳ ಕುತೂಹಲ ಮೂಡಿಸಿದೆ. ಅಲ್ಲಿ ಸಿಕ್ಕಿರುವ ಮೂಳೆ ಹಾಗೂ ಬಟ್ಟೆಗಳನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್ ಐಟಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ದ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಿದ್ದರು.
ಧರ್ಮಸ್ಥಳದ ವಿವಿಧೆಡೆ ಹೆಣಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಮುಂದುವರೆಸಿತ್ತು. ಈ ನಡುವೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿತ್ತು. ಈ ಬೆಳವಣಿಗೆ ನಡುವೆಯೇ ವಿಠಲಗೌಡನ ವಿಡಿಯೋವೊಂದು ವೈರಲ್ ಆಗಿದ್ದು, ಬಂಗ್ಲಗುಡ್ಡದಲ್ಲಿ ತಾನು ಹೆಣಗಳ ರಾಶಿ ನೋಡಿದ್ದೇನೆ. ಮೊದಲ ಬಾರಿ ಸ್ಥಳ ಮಹಜರಿಗೆ ಹೋದಾಗ ಮೂರು ಅಸ್ಥಿಪಂಜರವನ್ನು ನೋಡಿದ್ದೇನೆ. ಎರಡನೇ ಬಾರಿ ಹೋದಾಗ ಬಂಗ್ಲಗುಡ್ಡದಲ್ಲಿ ಮರದ ಕೆಳಭಾಗದಲ್ಲಿ ಹೆಣಗಳ ರಾಶಿ ಕಂಡಿದ್ದೇನೆ. ನನ್ನ ಕಣ್ಣಿಗೆ ಐದು ಅಸ್ಥಿಪಂಜರಗಳು ಕಂಡಿವೆ. ಅದರ ಬಳಿಯೇ ವಾಮಾಚಾರಕ್ಕೆ ಬಳಸುವ ಕೆಲ ವಸ್ತುಗಳು ಕೂಡ ಇದ್ದವು ಎಂದು ಸ್ಫೋಟಕ ಹೇಳಿಕೆ ನೀಡಿದ್ದನು. ಈ ಹಿನ್ನೆಲೆ ಎಸ್ ಐಟಿ ಅಧಿಕಾರಿಗಳು ಬಂಗ್ಲಗುಡ್ಡದಲ್ಲಿ ಮತ್ತೆ ಶೋಧಕಾರ್ಯ ಮುಂದುವರೆಸಿದ್ದರು.