ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಫ್ಯಾನ್ಸ್ ವಿರುದ್ಧ ಪೊಲೀಸ್ ಕಮಿಷನರ್ ಗೆ ರಮ್ಯಾ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಕಮಿಷನರ್ ಕಚೇರಿಗೆ ತೆರಳಿದ ನಟಿ ರಮ್ಯಾ ಕಮಿಷನರ್ ಸೀಮಂತ್ ಕುಮಾರ್ ಅವರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಪೋಸ್ಟ್ ಮಾಡಿರುವುದರ ವಿರುದ್ಧ ಸಿಡಿದೆದ್ದಿರುವ ನಟಿ ರಮ್ಯಾ, ಕಾನೂನು ಹೋರಾಟಕ್ಕೂ ಮುಂದಾಗಿದ್ದಾರೆ . ನಟ ಪ್ರಥಮ್, ವಿನಯ್ ರಾಜ್ ಕುಮಾರ್ ಸೇರಿ ಹಲವರು ನಟಿ ರಮ್ಯಾ ಬೆಂಬಲಕ್ಕೆ ನಿಂತಿದ್ದಾರೆ.
ನಾನು ರಮ್ಯಾ ಮೇಡಂ ಘನತೆಗೆ ಬೆಂಬಲ ನೀಡುತ್ತೇನೆ. ಎಲ್ಲರೂ ನಟಿ ರಮ್ಯಾ ಪರ ನಿಲ್ಲೋಣ. ಈಗಲೂ ನಾವು ನಟಿ ರಮ್ಯಾ ಅವರ ಆತ್ಮಗೌರವದ ಪರ ನಿಲ್ಲದೆ ಹೋದರೆ ನಾವು ಕಲಾವಿದರಾಗೋಕೆ ನಾಚಿಕೆಯಾಗಬೇಕು. ಕನ್ನಡ ಚಿತ್ರರಂಗವನ್ನು ಭಯಮುಕ್ತಗೊಳಿಸೋಣ ಎಂದು ಕರೆ ನೀಡಿದ್ದಾರೆ. ಇಷ್ಟೆಲ್ಲ ಆದರೂ ಜಾಣಕಿವುಡರಾಗಿರುವ ಪುಣ್ಯಾತ್ಮ ಕಲಾವಿದರಿಗೆ ದೇವರು ನೂರು ಕಾಲ ಬಾಳುವ ಆಯಸ್ಸು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ವಿನಯ್ ರಾಜ್ ಕುಮಾರ್ ಬೆಂಬಲಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಣುಮಕ್ಕಳನ್ನು ಕೀಳಾಗಿ ಕಾಣೋ ಪ್ರಪಂಚ ಬೆಳವಣಿಗೆಗೂ ಮುನ್ನ ನಾಶವಾಗಬೇಕು’ ಎಂದು ವಿನಯ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ನಟಿ ರಮ್ಯಾ ಪರ ಬೆಂಬಲಕ್ಕೆ ನಿಂತಿದ್ದಾರೆ.