
ನಾಳೆಯೇ ಶಾಸಕಾಂಗ ಪಕ್ಷದ ಸಭೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಶಾಸಕರ ಅಭಿಪ್ರಾಯ ಪಡೆದು ಸಿಎಂ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಹುದ್ದೆಗೆ ಈಗಾಗಲೆ ಪ್ರಮುಖವಾಗಿ ಎರಡು ಹೆಸರುಗಳು ಕೇಳಿ ಬರುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದೇ ಸಧ್ಯದ ಕುತೂಹಲ.

