HomeLatest NewsBREAKING : ನಿಮಗೆ ಇಷ್ಟ ಇಲ್ಲ ಅಂದ್ರೆ ಸಿನಿಮಾ ನೋಡ್ಬೇಡಿ , ಕರ್ನಾಟಕದಲ್ಲಿ ‘ಥಗ್ ಲೈಫ್’...

BREAKING : ನಿಮಗೆ ಇಷ್ಟ ಇಲ್ಲ ಅಂದ್ರೆ ಸಿನಿಮಾ ನೋಡ್ಬೇಡಿ , ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

ನವದೆಹಲಿ : ನಿಮಗೆ ಇಷ್ಟ ಇಲ್ಲ ಅಂದ್ರೆ ಸಿನಿಮಾ ನೋಡ್ಬೇಡಿ ಎಂದು ಹೇಳಿದ ಸುಪ್ರೀಂಕೋರ್ಟ್ ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಹೌದು. ಕರ್ನಾಟಕದಲ್ಲಿ ‘ಥಗ್ ಲೈಫ್ ‘ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ , ಕಮಲ್ ಹಾಸನ್ ನಟನೆಯ ಥಗ್ ಲೈಫ್ ‘ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರತಂಡಕ್ಕೆ ರಿಲೀಫ್ ಸಿಕ್ಕಿದೆ.

ಕಮಲ್ ಹಾಸನ್ ಅವರ ತಮಿಳು ಚಿತ್ರ ‘ಥಗ್ ಲೈಫ್’ ಬಿಡುಗಡೆಯನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದ್ದು, ನಟನ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ತಡೆಯುವುದಾಗಿ ಬೆದರಿಕೆ ಹಾಕಿರುವ ಗುಂಪುಗಳನ್ನು ತರಾಟೆಗೆ ತೆಗೆದುಕೊಂಡಿದೆ. ಚಿತ್ರ ಬಿಡುಗಡೆಗೆ ಬೆದರಿಸುವುದು, ಅಡ್ಡಿ ಮಾಡೋದು ಸರಿಯಲ್ಲ. ನಿಮಗೆ ಇಷ್ಟ ಅಲ್ಲ ಅಂದರೆ ಸಿನಿಮಾ ನೋಡಬೇಡಿ ಎಂದು ಸುಪ್ರೀಂಕೋರ್ಟ್ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ನಿರ್ಬಂಧ ಹೇರಲು ಮುಂದಾಗಿದ್ದ ವಾಣಿಜ್ಯ ಮಂಡಳಿ ಕ್ರಮ ಪ್ರಶ್ನಿಸಿ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ನಲ್ಲಿ ಜಯ ಸಿಗದ ಹಿನ್ನೆಲೆ ಚಿತ್ರತಂಡ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ಕಮಲ್ ಹಾಸನ್ ಒಡೆತನದರಾಜ್ ಕಮಲ್ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದೆ.ಕಮಲ್ ಹಾಸನ್ ಹೇಳಿಕೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೆ ನಿರ್ಬಂಧ ಹೇರುವುದು ಖಂಡನೀಯ. ಸಿನಿಮಾ ಬಿಡುಗಡೆಗೆ ಅವಕಾಶ ನೀಡಬೇಕೆಂದು ಚಿತ್ರದ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದರು. .
ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ಕ್ಷಮೆ ಕೇಳಬೇಕೆಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular