ನವದೆಹಲಿ : ಪಾಕ್ ನಾಗರಿಕರನ್ನು ಗುರುತಿಸುವಂತೆ ಎಲ್ಲಾ ರಾಜ್ಯದ ಸಿಎಂಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಪಾಕಿಸ್ತಾನಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ಪಾಕ್ ನಾಗರಿಕರನ್ನು ಗುರುತಿಸುವಂತೆ ಎಲ್ಲಾ ರಾಜ್ಯದ ಸಿಎಂಗಳಿಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ. ಪಾಕ್ ನಾಗರಿಕರನ್ನು ಗುರುತಿಸಿ ವಾಪಸ್ ಕಳುಹಿಸಿ ಎಂದು ಅಮಿತ್ ಶಾ ಖಡಕ್ ಸಂದೇಶ ರವಾನಿಸಿದ್ದಾರೆ.
ಹೌದು.ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಪೈಶಾಚಿಕ ಕೃತ್ಯಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ ಹಲವು ಮಹತ್ವದ ನಿರ್ಧಾರ ಕೈಗೊಳ್ಳುತ್ತಿದೆ.

