BREAKING: ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎಸ್ಐಟಿ ವಶಕ್ಕೆ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರು…!

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣ ದೊಡ್ಡ ತಿರುವು ಕಂಡಿದೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡರ ಇಬ್ಬರು ಆಪ್ತರನ್ನು ಎಸ್ಐಟಿ ತಂಡ ತನ್ನ ವಶಕ್ಕೆ ಪಡೆದಿದೆ.

ಚೇತನ್ ಹಾಗೂ ಲಿಖಿತ್ ಅವರನ್ನು ವಶಕ್ಕೆ ಪಡೆದಿರುವ ಎಸ್ಐಟಿ ತಂಡ, ಹಾಸನದ ಎನ್ ಆರ್ ರಕ್ತದಲ್ಲಿರುವ ಸೆನ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದು, ಬಳಿಕ ಇವರುಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿದೆ.

ಈವರೆಗೆ ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಕಾರ್ಯಕರ್ತರ ಮೂಲಕ ಹಾಸನದ ಎಲ್ಲೆಡೆ ಪೆನ್ ಡ್ರೈವ್ ಹಂಚಿಸಿದ್ದಾರೆ ಎಂದು ಜೆಡಿಎಸ್, ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದು ಅಲ್ಲದೆ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದರು. ಇದರ ಮಧ್ಯೆ ಬಿಜೆಪಿ ಮಾಜಿ ಶಾಸಕನ ಆಪ್ತರನ್ನು ಎಸ್ಐಟಿ ತಂಡ ವಶಕ್ಕೆ ಪಡೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read