BREAKING : ಪ್ರೀತಿಗೆ ಕುಟುಂಬಸ್ಥರ ಅಡ್ಡಿ : ಕೊಪ್ಪಳದಲ್ಲಿ ತುಂಗಾಭದ್ರಾ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ.!

ಕೊಪ್ಪಳ : ಪ್ರೀತಿಗೆ ಕುಟುಂಬಸ್ಥರು ಅಡ್ಡಿಪಡಿಸಿದ್ದಕ್ಕೆ ಬೇಸತ್ತು ತುಂಗಾಭದ್ರಾ ಎಡದಂಡೆ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳದ ಮುನಿರಾಬಾದ್ ನಲ್ಲಿ ಎಡದಂಡೆ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಅಂಜಲಿ (18) ಪ್ರವೀಣ್ (18) ಎಂದು ಗುರುತಿಸಲಾಗಿದೆ.

2 ದಿನದ ಹಿಂದೆ ಮನೆ ಬಿಟ್ಟು ಹೋಗಿದ್ದ ಪ್ರವೀಣ್ ಹಾಗೂ ಅಂಜಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರು ಕೂಡ ಸಾವಿಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ 1 ವರ್ಷಗಳಿಂದ  ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read