HomeKarnatakaBREAKING: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಕಾಂಗ್ರೆಸ್ ಸೇರ್ಪಡೆ

BREAKING: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಕಾಂಗ್ರೆಸ್ ಸೇರ್ಪಡೆ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ವಿಧಾನ ಪರಿಷತ್ ಬಿಜೆಪಿ ಸದಸ್ಯ ಪುಟ್ಟಣ್ಣ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಇದೀಗ ಬಿಜೆಪಿ ಮತ್ತೊಂದು ವಿಕೆಟ್ ಪತನವಾಗಿದೆ.

ವಿಧಾನಪರಿಷತ್ ಮಾಜಿ ಸದಸ್ಯ, ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮೋಹನ್ ಲಿಂಬಿಕಾಯಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಕಾಂಗ್ರೆಸ್ ಬಾವುಟ ನೀಡಿ ಲಿಂಬಿಕಾಯಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಅವರ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿದ್ದ ಲಿಂಬಿಕಾಯಿ ಈಗ ಮಲ್ಲಿಕಾರ್ಜುನ ಖರ್ಗೆ ನಾಯಕತ್ವ ಮೆಚ್ಚಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular